ಚಾಮರಾಜನಗರ : ಬೆಳ್ಳಂ ಬೆಳಗ್ಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಬಳಿಯ ಆಲಹಳ್ಳಿ ಗ್ರಾಮದಲ್ಲಿ ಕಾರ್ಯಪಾಲಕ ಇಂಜನೀಯರ್ ರವರ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಕಾರ್ಯಪಾಲಕ ಇಂಜನೀಯರ್ ಆಗಿದ್ದ ರವಿಕುಮಾರ್ ರವರು ಅಪಾರ ಆಸ್ತಿ ಹೊಂದಿದ್ದಾರೆ ಎಂದು ದೂರು ಬಂದಿರುವ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮೈಸೂರಿನಲ್ಲಿರುವ ರವಿಕುಮಾರ್ ರವರ ಮನೆ ಹಾಗೂ ಹುಟ್ಟೂರಾದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಬಳಿಯ ಆಲಹಳ್ಳಿ ಗ್ರಾಮದಲ್ಲಿರುವ ಮನೆಯಲ್ಲಿ ಶೋಧನಾ ಕಾರ್ಯ ನಡೆಸುತ್ತಿದ್ದಾರೆ.
ಲೋಕಾಯುಕ್ತ ಅಧಿಕಾರಿ ಮ್ಯಾಥೊ ಥಾಮಸ್ ನೇತೃತ್ವದಲ್ಲಿ ತಪಾಸಣೆ ನಡೆಸುತ್ತಿದ್ದಾರೆ.