ಮೈಸೂರು : ಅವೈಜ್ಞಾನಿಕವಾಗಿ ರಸ್ತೆಯಲ್ಲಿ ಹಂಪ್ಸ್ ನಿರ್ಮಾಣ ಮಾಡಿರುವುದನ್ನು ತೆರವು ಗೊಳಿಸುವಂತೆ ಒತ್ತಾಯಿಸಿದ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಆಗ್ರಹಿಸಿದ್ದಾರೆ.
ಮಾನಸ ಗಂಗೋತ್ರಿ ಮೈಸೂರು ವಿಶ್ವ ವಿದ್ಯಾನಿಲಯದ ಮುಖ್ಯ ದ್ವಾರದ ರಸ್ತೆಯಲ್ಲಿ ರಾತ್ರೋ ರಾತ್ರಿ ಅವೈಜ್ಞಾನಿಕ ಹಂಪ್ಸ್ ನಿರ್ಮಾಣ ವ್ಯಕ್ತಿಯೊಬ್ಬ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾನೆ.ಹಂಪ್ಸ್ ನಿರ್ಮಾಣ ಮಾಡಿ ನಾಮಫಲಕ ಅಳವಡಿಸಿಲ್ಲ.ಸಾವಿರಾರು ಜನ ಹೊರಡುವ ರಸ್ತೆಯಲ್ಲಿ ಅವೈಜ್ಞಾನಿಕ ಹಂಪ್ಸ್ ನಿರ್ಮಾಣ ಅಗತ್ಯವಿಲ್ಲ ಎಂದರು.
ಮಹಾನಗರ ಪಾಲಿಕೆಯ ಆಯುಕ್ತರಿಗೆ ತೆರವು ಗೊಳಿಸುವಂತೆ ಆಗ್ರಹಿಸಿದ ನಗರಾಧ್ಯಕ್ಷ ಎಲ್ ನಾಗೇಂದ್ರ.
ಟ್ರಾಫಿಕ್ ಪೊಲೀಸ್ ಗೆ ಅನುಮತಿ ಪಡೆಯದೆ ರಾತ್ರಿ ವೇಳೆ ಅವೈಜ್ಞಾನಿಕ ಹಂಪ್ಸ್ ನಿರ್ಮಾಣ ಮಾಡಿದ್ದೀರಾ ಸಂಬಂಧ ಪಟ್ಟವರು ಶೀಘ್ರದಲ್ಲಿ ತೆರವು ಗೊಳಿಸಿ.
ಆಯುಕ್ತರಿಗೆ ನೀವು ತೆರವು ಗೊಳಿಸದಿದ್ದರೆ ಪ್ರತಿಭಟನೆ ಮಾಡುತ್ತೇನೆ ಎಂದು ನಾಗೇಂದ್ರ ಎಚ್ಚರಿಸಿದರು.
ಸ್ಥಳ ಪರಿಶೀಲನೆ ವೇಳೆ ಬಿಜೆಪಿ ಮುಖಂಡರು ಕಾರ್ಯಕರ್ತರು ಜೊತೆಗಿದ್ದರು.