ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಪೆಡ್ಲರ್ ಗಳನ್ನ ಬಂಧಿಸಲಾಗಿದ್ದು ಆರೋಪಿಗಳಿಂದ 40 ಲಕ್ಷ ಮೌಲ್ಯದ 85 ಕೆಜಿ 730 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಒಡಿಸ್ಸಾ ಮೂಲದ ರಾಜಿಕ್ ಮಲ್ಲಿಕ್ ಹಾಗೂ ಆಂಧ್ರ ಮೂಲದ ಜಾಫರ್ ಬಂಧಿತರು.ಸಾತಗಳ್ಳಿ ಒಂದನೇ ಹಂತದಲ್ಲಿ ಬೊಲೆರೋ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಆರೋಪಿಗಳು ಮಾಲು ಸಮೇತ ಸಿಕ್ಕಿಬಿದ್ದಿದ್ದಾರೆ.ಒರಿಸ್ಸಾದಿಂದ ರೈಲಿನಲ್ಲಿ ಗಾಂಜಾ ತಂದು ಮೈಸೂರಿನಲ್ಲಿ ಚಿಲ್ಲರೆಯಾಗಿ ಮಾರಾಟ ಮಾಡಲು ಮುಂದಾಗಿದ್ದ ಆರೋಪಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಎಂ.ಮೋಹನ್ ಕುಮಾರ್ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಮಾರುತಿ ಅಂತರಗಟ್ಟಿ,ಕಿರಣ್ ಎಂ ಹಂಪಿಹೋಳಿ ಎಎಸ್ಸೈ ಅಸ್ಗರ್ ಖಾನ್ ಹಾಗೂ ಸಿಬ್ಬಂದಿಗಳಾದ ಸಲೀಂಪಾಷ,ರಾಮಸ್ವಾಮಿ,ಲಕ್ಷ್ಮೀಕಾಂತ್,ಉಮಾಮಹೇಶ್,ಪ್ರಕಾಶ್,ಗಣೇಶ್,ಮಹೇಶ್,ಸುರೇಶ್,ಚಂದ್ರಶೇಖರ್,ನರಸಿಂಹ,ಗೋವಿಂದ,ಮಹೇಶ್,ಮಧುಸೂಧನ್,ಶಿವಣ್ಣ,ರಮ್ಯ,ಮಮತ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.ಈ ಸಂಭಂಧ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿಐ ಮೋಹನ್ ಕುಮಾರ್ ರವರ ತಂಡದ ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತರಾದ ಡಾ.ಬಿ.ರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಪ್ರಶಂಸಿಸಿದ್ದಾರೆ