ಆದಾಯ ತೆರಿಗೆ ನೀತಿಯಲ್ಲಿ ಬದಲಾವಣೆ ಇಲ್ಲ.
ನವದೆಹಲಿ : ಸಂಸತ್ ಭವನದ ನೂತನ ಕಟ್ಟಡಲ್ಲಿ ಮೊದಲ ಬಾರಿಗೆ ಬಜೆಟ್ ಮಂಡಿಸಲಾಗಿದ್ದು, ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಅಧಿಕಾರಾವಧಿಯಲ್ಲಿ ಸತತ 6ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ಬರೆದರು.
ಮಧ್ಯಂತರ ಆಯವ್ಯಯಗಳ ಪಟ್ಟಿ ಇದಾಗಿದ್ದು, ಸಾರ್ವತ್ರಿಕ ಚುನಾವಣೆ ನಂತರ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಆಗಲಿದೆ.ಈ ನಡುವೆ ಆದಾಯ ತೆರಿಗೆ ನೀತಿಯಲ್ಲಿ ಯಾವುದೇ ವಿನಾಯಿತಿ ಘೋಷಣೆ ಮಾಡಿಲ್ಲ. ಲೋಕಸಭೆಯಲ್ಲಿ ಇಂದು ಮಧ್ಯಂತರ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆದಾಯ ತೆರಿಗೆ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. 7 ಲಕ್ಷ ಆದಾಯ ಇರುವವರಿಗೆ ತೆರಿಗೆ ಇಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ 7 ಲಕ್ಷ ಆದಾಯ ಇರುವವರಿಗೆ ತೆರಿಗೆ ವಿನಾಯಿತಿ ಇದೆ. ಇನ್ನು ಕಾರ್ಪೋರೇಟ್ ಟ್ಯಾಕ್ಸ್ ಅನ್ನು ಶೇ.30ರಿಂದ ಶೇ22ಕ್ಕೆ ಇಳಿಕೆ ಮಾಡಲಾಗಿದೆ. ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.
- ಬಜೆಟ್‌ನ ಪ್ರಮುಖ ಅಂಶಗಳು:
- 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ
- ಕಳೆದ 10 ವರ್ಷದಲ್ಲಿ ದೇಶದ ಆರ್ಥಿಕ ಸ್ಥಿತಿ ಬದಲಾಗಿದೆ.
- ಆಶಾ ಕಾರ್ಯಕರ್ತರಿಗೆ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ
- 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ
- ಕಳೆದ 10 ವರ್ಷದಲ್ಲಿ ದೇಶದ ಆರ್ಥಿಕ ಸ್ಥಿತಿ ಬದಲಾಗಿದೆ.
- ಫಸಲ್ ಬಿಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭ
ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. - ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ. * ಗ್ರಾಮೀಣ ಜನರ ಆದಾಯ ಹೆಚ್ಚಿದೆ.
- 2047ರೊಳಗೆ ವಿಕಸಿತ ಭಾರತದ ಗುರಿ
- ಮೀನುಗಾರಿಕೆಗೆ ಹೊಸ ಸಚಿವಾಲಯ ಆರಂಭ
- ಮೇಲ್ಛಾವಣಿ ಸೋಲಾರ್‌ನಿಂದ 1 ಕೋಟಿ ಮನೆಗಳಿಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್
- ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಹೆಚ್ಚಿನ ಆದ್ಯತೆ
- ಸಿಲ್ಕ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ
- ದೇಶದ ಜನರ ಸರಾಸರಿ ಆದಾಯ ಶೇ 50ರಷ್ಟು ಏರಿದೆ
- 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ
- ಏಳು ಲಕ್ಷದವರೆಗೆ ಆದಾಯ ಇರುವವರಿಗೆ ಆದಾಯ ತೆರಿಗೆ ಇಲ್ಲ