ಮೈಸೂರು : ಮೈಸೂರಿನಲ್ಲಿ ಮಾನವ ಕಾಡು ಪ್ರಾಣಿಗಳ ಸಂಘರ್ಷ ಮುಂದುವರೆದಿದೆ.ಕಾಡಾನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಹುಣಸೂರು ತಾಲ್ಲೂಕು ಮುದಗನೂರು ಗ್ರಾಮದಲ್ಲಿ ನಡೆದಿದೆ.ಚಲುವಯ್ಯ (65) ಆನೆ ದಾಳಿಯಿಂದ ಮೃತಪಟ್ಟ ರೈತ.
ಮುಂಜಾನೆ ಜಮೀನಿನಲ್ಲಿ ಕಟಾವು ಮಾಡಿದ್ದ ರಾಗಿ ಬೆಳೆ ಕಂತೆ ಕಟ್ಟುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ.
ಕಾಡಾನೆ ದಾಳಿಯಿಂದ ಸ್ಥಳದಲ್ಲೇ ರೈತ ಸಾವನ್ನಪ್ಪಿದ್ದಾರೆ.
ನಿರಂತರ ಕಾಡು ಪ್ರಾಣಿ ಹಾವಳಿಯಿಂದ ರೈತರಲ್ಲಿ ಆತಂಕ
ಶಾಶ್ವತ ಪರಿಹಾರಕ್ಕಾಗಿ ಗ್ರಾಮಸ್ಥರು ರೈತರ ಒತ್ತಾಯ ಮಾಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಭೇಟಿ ನೀಡಿ ವಿಚರಾರಣೆ ನಡೆಸಿದ್ದಾರೆ.