ಮೈಸೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಡಿ.ಸಿ ಕಚೇರಿಗೆ ಮುತ್ತಿಗೆ ಯತ್ನ ನಡೆಸಿತು.
ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿದರು. ಡಿಸಿ ಕಚೇರಿ ನುಗ್ಗಲು ಯತ್ನಿಸಿದ ರೈತರನ್ನು ಗೇಟ್ ಬಳಿ ಪೋಲಿಸರು ತಡೆದರು. ಈ ವೇಳೆ
ಪೋಲಿಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ಹಳ್ಳಿಕೆರಹುಂಡಿ ಭಾಗ್ಯರಾಜು ಮಾತನಾಡಿ
ಕಬ್ಬಿನ ಹೆಚ್ಚುವರಿ ಹಣ, ಸಮರ್ಪಕ ವಿದ್ಯುತ್ ಪೂರೈಕೆ, ಸಾಲ ಮನ್ನಾ ಸೇರಿದಂತೆ ಹಲವು ಬೇಡಿಕೆಗಳ ಮುಂದಿಟ್ಟು ಪ್ರತಿಭಟನೆ ಮಾಡುತ್ತಿದ್ದೇವೆ. ನಮ್ಮ ಕೂಗು ಯಾರಿಗೂ ಕೇಳುತ್ತಿಲ್ಲ ಎಂದು ಕಿಡಿಕಾರಿದರು.ಅಲ್ಲದೆ ಉರಿ ಬಿಸಿಲಿನಲ್ಲೇ ಡಿ.ಸಿ ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಸಿದರು. ಹಳ್ಳಿಕೆರೆಹುಂಡಿ ಭಾಗ್ಯರಾಜು ನೇತೃತ್ವದಲ್ಲಿ ಪ್ರತಿಭಟಯಲ್ಲಿ ಮಹಿಳೆಯರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು