ಮೈಸೂರು : ದಕ್ಷಿಣ ಭಾರತ ಉತ್ತರ ಭಾರತ ಪ್ರತ್ಯೇಕತೆ ಬಗ್ಗೆ ಸಂಸದ ಡಿ ಕೆ ಸುರೇಶ್ ಹೇಳಿಕೆ ವಿಚಾರಕ್ಕೆ
ಆ ರೀತಿ ಹೇಳಿಕೆ ಸರಿಯಲ್ಲ ಆ ರೀತಿ ಹೇಳಬಾರದು.
ಇದನ್ನು ನಾನು ಸಿಎಂ ಸೇರಿ ಎಲ್ಲರೂ ಹೇಳಿದ್ದೇವೆ ಎಂದು
ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆದರೆ ಅವರು ಹೇಳಿರುವ ಉದ್ದೇಶ ಬೇರೆ ಇದೆ.
ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗೆ ಬ್ರೇಕ್, ಶಾಸಕ ಬಾಲಕೃಷ್ಣ ಹೇಳಿಕೆ ವಿಚಾರ.
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ.
ಬಾಲಕೃಷ್ಣ ಹೇಳಿದರು ರಾಜಣ್ಣ ಹೇಳಿದರು ಯಾರೋ ಏನೋ ಹೇಳಿದರು ಅಂತಾ ಗ್ಯಾರಂಟಿ ಯೋಜನೆ ನಿಲ್ಲಲ್ಲ.
ಸಿದ್ದರಾಮಯ್ಯ ಹೇಳಿದ ಎಲ್ಲಾ ಕೆಲಸ ಮಾಡಿದ್ದಾರೆ. ಮುಂದೆಯೂ ಮಾಡ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಹೆಸರಿಗೆ ಮಾತ್ರ ರಾಮರಾಜ್ಯ ಅನ್ನುತ್ತಾರೆ.
ಮಾಡುವುದೆಲ್ಲಾ ಅಧರ್ಮದ ಕೆಲಸ.
ಮೋದಿ ಪ್ರಧಾನಿ ಆದ ದಿನದಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ ಶುರುವಾಗಿದೆ.ಸರ್ವಾಧಿಕಾರಿ ಧೋರಣೆ ಎದ್ದು ಕಾಣುತ್ತಿದೆ. ಅವರು ವಿರುದ್ದ ಮಾತನಾಡಿದವರನ್ನು ಮುಗಿಸುವ ಹೆದರಿಸುವ ಬೆದರಿಸುವ ಕೆಲಸ ಮಾಡಲಾಗುತ್ತಿದೆ. ಬಿಜೆಪಿಯವರೇ ಬಿಜೆಪಿ ಕೇಂದ್ರ ಮುಖಂಡರನ್ನು ಪ್ರಶ್ನೆ ಮಾಡುವ ಪರಿಸ್ಥಿತಿ ಇಲ್ಲ.
ಮಾಡಿದರೆ ಅವರನ್ನು ಮುಗಿಸುವ ಕೆಲಸ ಮಾಡಲಾಗುತ್ತದೆ. ಯಾವ ತನಿಖಾ ಸಂಸ್ಥೆಗಳು ರಾಜ್ಯಪಾಲರು ಸ್ವತಂತ್ರವಾಗಿಲ್ಲ.
ಚುನಾವಣೆ ಬಂದಾಗ ಇವೆಲ್ಲವನ್ನು ಬಳಸಿಕೊಳ್ಳುವ ಕೆಲಸ ಮಾಡಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.