ಮೈಸೂರು : ಮಂಡ್ಯದ ಕೆರಗೋಡಿನಲ್ಲಿ ಧ್ವಜ ಸ್ತಂಭ ತೆರವು ವಿರೋಧಿಸಿ ಮಂಡ್ಯ ಬಂದ್ ವಿಚಾರಕ್ಕೆ
ಸಚಿವ ಡಾ ಹೆಚ್ ಸಿ ಮಹದೇವಪ್ಪ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಇದೆಲ್ಲ ಜನರ ವೈಯುಕ್ತಿಕ ವಿಚಾರ. ಧಾರ್ಮಿಕ ಆಚಾರ ವಿಚಾರಗಳನ್ನು ರಾಜಕೀಯಗೊಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ, ಸಂವಿಧಾನಕ್ಕೆ ಶೋಭೆ ತರುವುದಿಲ್ಲ.
ಧರ್ಮ, ದೇವರ ಹೆಸರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಅವಕಾಶ ಮಾಡಿಕೊಡಬಾರದು.
ಮಂಡ್ಯ ಪ್ರಗತಿಪರ ಜಿಲ್ಲೆಯಾಗಿದೆ. ಅಲ್ಲಿನ ಜನರು ಸೌಹಾರ್ದ ಒಗ್ಗಟ್ಟು ಕಾಪಾಡಿಕೊಳ್ಳಬೇಕು ಎಂದರು.
ಕಾಂಗ್ರೆಸ್ ಸಂವಿಧಾನ, ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಪಕ್ಷ.ಕಾಂಗ್ರೆಸ್ ಜಾತಿ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದಿಲ್ಲ. ಬಿಜೆಪಿಯವರು ಜೆಡಿಎಸ್ ಜೊತೆ ಸೇರಿದ ಬಳಿಕ ಬಲ ಹೆಚ್ಚಿಸಿಕೊಳ್ಳಲು ಮುಗ್ದ ಜನರನ್ನು ಬಲಿಪಶು ಮಾಡುವುದು ಸರಿಯಲ್ಲ. ಮಂಡ್ಯದ ಜನರು ಪ್ರಬುದ್ದರಾಗಿದ್ದು ಸಂಯಮ ಕಾಯ್ದುಕೊಳ್ಳಬೇಕು.
ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.