ಮೈಸೂರು : ರಾಜ್ಯದ ರೈತರನ್ನು ಕೇಂದ್ರ ಸರ್ಕಾರ ಮಧ್ಯಪ್ರದೇಶದಲ್ಲಿ ಬಂಧಿಸಿರುವ ಹಿನ್ನೆಲೆಯಲ್ಲಿ ಮೈಸೂರು ನಂಜನಗೂಡು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ನಾಳೆ ದೆಹಲಿಯಲ್ಲಿ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಹಮ್ಮಿಕೊಂಡಿರುವ ದೇಶದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ, ಕೃಷಿ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಹಾಗೂ ರೈತರ ಇನ್ನಿತರ ಸಮಸೆಗಳನ್ನು ಪರಿಹರಿಸುವಂತೆ ಒತ್ತಾಯಿಸಲು ರಾಜ್ಯದಿಂದ ಹೊರಟಿದ್ದ ನೂರಾರು ರೈತರನ್ನು , ಮಹಿಳೆಯರನ್ನು ಮದ್ಯ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಬೂಪಾಲ್ ರೈಲ್ವೆ ನಿಲ್ದಾಣದಲ್ಲಿ ರೈಲು ತಡೆದು ಬಂಧನ ಮಾಡಿದ್ದಾರೆ.
ಕೇಂದ್ರಸರ್ಕಾರದ ನಡೆಗೆ ಖಂಡಿಸಿ ರಸ್ತೆ ತಡೆ ಪ್ರತಿಭಟನೆ ನೆಡೆಸಿದ ಪ್ರತಿಭಟನಾಕಾರರು.ರಾಜ್ಯ ಸಂಘಟನಾ ಕಾರ್ಯದರ್ಶಿಅತ್ತಹಳ್ಳಿ ದೇವರಾಜ್ ಮತ್ತಿತರು ರೈತರು ಭಾಗಿ ಯಾಗಿ ಬಂಧಿಸಿರುವ ರೈತರನ್ನು ಬಿಡುಗಡೆ ಮಾಡುವಂತೆ ಪ್ರತಿಭಟನೆ.