ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ಅವರು ವಿಶ್ವಾಸಮತ ಗೆದ್ದಿದ್ದಾರೆ. ಎನ್ಡಿಎ ಮೈತ್ರಿಕೂಟದ ಪರವಾಗಿ ಒಟ್ಟು 129 ಶಾಸಕರು ಮತ ಚಲಾಯಿಸಿದ್ದು, ವಿಶ್ವಾಸ ಪರೀಕ್ಷೆಯಲ್ಲಿ ಗೆಲುವು ಸಾಧಿಸಿದ್ದಾರೆ.
243 ಸದಸ್ಯರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 122 ಸದಸ್ಯರ ಬಲ ಬೇಕಿತ್ತು. ಈ ಪೈಕಿ 129 ಮತಗಳು ಸರ್ಕಾರದ ಪರ ಚಲಾವಣೆಗೊಂಡವು. ಬಳಿಕ ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಮೈತ್ರಿ ಸಂದರ್ಭದಲ್ಲಿ ಆರ್ಜೆಡಿ ಭ್ರಷ್ಟ ಆಚರಣೆಗಳಲ್ಲಿ ತೊಡಗಿಕೊಂಡಿತ್ತು. ಆದ್ರೆ ಪ್ರಸ್ತುತ ಎನ್ಡಿಎ ಸರ್ಕಾರವು ಈ ಭ್ರಷ್ಟಚಾರದ ವಿರುದ್ಧ ತನಿಖೆ ನಡೆಸುತ್ತದೆ ಎಂದು ಹೇಳಿದ್ದಾರೆ.