ಮೈಸೂರು : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಎರಡು ಚಿರತೆಗಳು ಬಿದ್ದಿವೆ.ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕುರುಬಾಳಹುಂಡಿ ಗ್ರಾಮದಲ್ಲಿ 4 ವರ್ಷದ ಗಂಡು ಚಿರತೆ ಸೆರೆಯಾಗಿದ್ದು, ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ 5 ವರ್ಷದ ಗಂಡು ಚಿರತೆ ಸೆರೆಯಾಗಿದೆ.
ಕಳೆದ ಹಲವು ತಿಂಗಳಿನಿಂದ ಚಿರತೆ ಹಾವಳಿ ಜಾಸ್ತಿಯಾಗಿದ್ದು, ಸಾಕು ಪ್ರಾಣಿಗಳ ಮೇಲೆ ಪದೇ ಪಡೆ ಚಿರತೆಗಳು ದಾಳಿ ಮಾಡಿದ್ದವು. ಜಮೀನಿಗೆ ಹೋಗಲು ಹೆದರುವ ಸ್ಥಿತಿ ನಿರ್ಮಾಣವಾಗಿತ್ತು.
ಈ ಹಿನ್ನೆಲೆ ಚಿರತೆಗಳ ಓಡಾಟ ಗಮನಿಸಿ ಬೋನು ಇರಿಸಲಾಗಿತ್ತು. ಸ್ಥಳಕ್ಕೆ ಅರಣ್ಯಧಿಕಾರಿಗಳ ಭೇಟಿ ನೀಡಿ ಸುರಕ್ಷಿತ ಸ್ಥಳಕ್ಕೆ ಚಿರತೆಗಳ ರವಾನೆ ಮಾಡಿದ್ದಾರೆ