ಪುಲ್ವಾಮಾ ದಾಳಿ ಸಂಭವಿಸಿ ಇಂದಿಗೆ 5 ವರ್ಷ ತುಂಬಿದ್ದು ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
2019 ರ ಫೆಬ್ರವರಿ 14 ರಂದು ನಡೆದ ಪುಲ್ವಾಮಾ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 40 ಸಿಬ್ಬಂದಿ ಹುತಾತ್ಮರಾಗಿದ್ದರು. ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನಡೆಸಿತ್ತು.ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದು, ಸೈನಿಕರ ತ್ಯಾಗವನ್ನು ಸದಾ ಸ್ಮರಿಸಲಾಗುತ್ತದೆ. ನಾನು ಪುಲ್ವಾಮಾದಲ್ಲಿ ಹುತಾತ್ಮರಾದ ವೀರ ವೀರರಿಗೆ ಗೌರವ ಸಲ್ಲಿಸುತ್ತೇನೆ. ಅವರ ಸೇವೆ ಮತ್ತು ನಮ್ಮ ದೇಶಕ್ಕಾಗಿ ತ್ಯಾಗ ಯಾವಾಗಲೂ ಸ್ಮರಣೀಯ. ಹುತಾತ್ಮರ ತ್ಯಾಗ ಬಲಿದಾನ ಎಂದಿಗೂ ಅಜರಾಮರ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ .