ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ವಿಧಾನ್ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ವಿಚಾರವನ್ನ ಕಾಂಗ್ರೆಸ್ ಸದಸ್ಯ ಮಾದೇಗೌಡ ಅವರು ಪ್ರಸ್ತಾಪಿಸಿದರು. ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್ಎಸ್ಆರ್ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್ ಲೈನ್ ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ರಾಮಲಿಂಗಾರೆಡ್ಡಿ ಮೂರು ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದರು.