ಚಾಮರಾಜನಗರ : ಹುಬ್ಬಳಿ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಲ್ಲ ಹೈಕಮಾಂಡ್ ಅವಕಾಶ ಕೊಟ್ಟರೆ ಸ್ಪರ್ಧಿಸುವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಚಾಮರಾಜನಗರದಲ್ಲಿ ಹೇಳಿಕೆ ನೀಡಿದರು.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾದ್ಯಮವರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಕಾಂಗ್ರೇಸ್ ನಿಂದ ಬಿಜೆಪಿಗೆ ನಮ್ಮ ಅಭಿಮಾನಿಗಳು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಮತ್ತಷ್ಟು ಮಂದಿ ಕಾಂಗ್ರೇಸ್ ನಿಂದ ಬಿಜೆಪಿಗೆ ಪಕ್ಷಾಂತರ ಆಗುವ ಬಗ್ಗೆ ಮಾಹಿತಿ ನೀಡಿದರು.
ರೈತರ ಅನುಕೂಲವಾಗುವ ಹಾಗೆ ಕೇಂದ್ರ ಸರ್ಕಾರ ಕಾರ್ಯಕ್ರಮ ಹಾಕಿಕೊಂಡಿದೆ. ನರೇಂದ್ರ ಮೋದಿಯವರು ಅತೀ ಹೆಚ್ಚು ಅನುಕೂಲವಾಗುವಂತೆ ಯೋಜನೆ ಹಾಕಿಕೊಂಡಿದ್ದಾರೆ. ರೈತರ ಹಿತಾಸಕ್ತಿ ಕಾಪಾಡಲು ಬಿಜೆಪಿ ಶತ ಸಿದ್ದಎಂದು ಹೇಳಿದರು.
ರಾಜ್ಯದಲ್ಲಿ ಜೆಡಿಎಸ್ ನೊಂದಿಗೆ ಬಿಜೆಪಿ ಮೈತ್ರಿ ಕಂಗಟ್ಟಿಲ್ಲ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಅಮಿದ್ ಷಾ ಬಂದಿದ್ದು ಸುತ್ತೂರು ಜಾತ್ರೆಗಾಗಿ ಅಲ್ಲಿಗೆ ನಾನು ಹೋಗಿಲ್ಲ ಅಮಿದ್ ಷಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಏನು ನಡೆದಿದೆ ಎಂದು ನನಗೆ ತಿಳಿದಿಲ್ಲ ಎಂದು ಹೇಳಿದರು.