ಲೋಕಸಭೆ ಚುನಾವಣೆ ತಯಾರಿ ಭಾಗವಾಗಿ ಇಂದಿನಿಂದ ಎರಡು ದಿನಗಳ ಕಾಲ ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿ ಹೈವೋಲ್ಟೇಜ್ ಸಭೆಯನ್ನು ದೆಹಲಿಯಲ್ಲಿ ನಡೆಸಲಿದೆ.
ದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಸಭೆಯಲ್ಲಿ ದೇಶದ್ಯಾಂತ 11,500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಲಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕಾರ್ಯಕ್ರಮದ ಉದ್ಘಾಟನಾ ಭಾಷಣ ಮಾಡಲಿದ್ದು, ಮರುದಿನ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಈ ನಡುವೆ ಗೃಹ ಸಚಿವ ಅಮಿತ್ ಶಾ ಒಳಗೊಂಡಂತೆ ಹಲವು ಪ್ರಮುಖ ಸಚಿವರು ಸರ್ಕಾರದ ಸಾಧನೆಗಳ ಬಗ್ಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಪಕ್ಷದ ಆಪ್ತ ಮೂಲಗಳು ತಿಳಿಸಿವೆ.