ಮೈಸೂರು : ಸಿಎಂ ಸಿದ್ದರಾಮಯ್ಯ ತವರಲ್ಲಿ ಅನುದಾನದ ಪಾಲಿಟಿಕ್ಸ್ ಶುರುವಾಗಿದೆ. ಬಿಜೆಪಿ ಶಾಸಕನ ಅನುದಾನವನ್ನು ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಮಾಜಿ ಮೇಯರ್ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಂದ ಈ ರೀತಿ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಮಾಜಿ ಮೇಯರ್ ಶಿವಕುಮಾರ್ ಆರೋಪ ಮಾಡಿದ್ದಾರೆ. ಕಳೆದ ಬಿಜೆಪಿ ಸರ್ಕಾರದಲ್ಲಿ ಕೃಷ್ಣರಾಜ ಕ್ಷೇತ್ರಕ್ಕೆ 45 ಕೋಟಿ ರೂ. ವಿಶೇಷ ಅನುದಾನ ಮಂಜೂರಾಗಿತ್ತು. ಅಂದಿನ ಶಾಸಕರಾಗಿದ್ದ ಎಸ್.ಎ ರಾಮದಾಸ್ ಅವಧಿಯಲ್ಲಿ ಕೆ.ಆರ್ ಕ್ಷೇತ್ರದ ಅಭಿವೃದ್ಧಿಗೆ ಮಂಜೂರಾಗಿದ್ದ 45 ಕೋಟಿ ರೂ. ಅನುದಾನ ನೀಡಲಾಗಿತ್ತು. ಸದ್ಯ ಈ ಅನುದಾನವನ್ನು ಚಾಮರಾಜ, ಎನ್.ಆರ್ ಕ್ಷೇತ್ರಗಳಿಗೆ ಮರು ಹಂಚಿಕೆ ಮಾಡಲಾಗಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಚಾಮರಾಜ ಕ್ಷೇತ್ರಕ್ಕೆ 20 ಕೋಟಿ, ಎನ್.ಆರ್ ಕ್ಷೇತ್ರಕ್ಕೆ 25 ಕೋಟಿ ಹಣ ಹಂಚಿಕೆ ಮಾಡಲಾಗಿದೆ. ಬಿಜೆಪಿ ಶಾಸಕರಿದ್ದಾರೆ ಎನ್ನುವ ಕಾರಣಕ್ಕೆ ಕೆ.ಆರ್ ಕ್ಷೇತ್ರದ ಅನುದಾನ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹಂಚಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.