ಮೈಸೂರು : ಬಿಜೆಪಿ ಹಿರಿಯ ನಾಯಕ ಸಂಸದ ಶ್ರೀನಿವಾಸ್ ಪ್ರಸಾದ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಗೆ ಲಾಭಿ ನಡೆಯುತ್ತಿರುವ ಸಂದರ್ಭದಲ್ಲೇ ವಿಜಯೇಂದ್ರ ಭೇಟಿ ನೀಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.ಈಗಗಲೇ ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಅವರ ಸ್ಥಾನಕ್ಕೆ ಅವರ ಇಬ್ಬರು ಅಳಿಯಂದಿರು ಪೈಪೋಟಿ ನಡೆಸುತ್ತಿದ್ದು ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಪ್ರಶ್ನೆ ಕಾಡುತ್ತಿದೆ.
ಶ್ರೀನಿವಾಸ್ ಪ್ರಸಾದ್ ಭೇಟಿ ಬಳಿಕ ಮಾತನಾಡಿದ ಬಿವೈ ವಿಜಯೇಂದ್ರ, ಮೈಸೂರಿಗೆ ಬಂದಾಗ ನಮ್ಮೆಲ್ಲರ ಹಿರಿಯ ನಾಯಕರಾದ ಶ್ರೀನಿವಾಸ್ ಪ್ರಸಾದ್ ಅವರನ್ನ ಭೇಟಿ ಮಾಡುತ್ತಿರುತ್ತೇನೆ. ಅದರಂತೆ ಇಂದು ಕೂಡ ಭೇಟಿ ಮಾಡಿದ್ದೇನೆ. ಮುಂದಿನ ತಿಂಗಳು 17ಕ್ಕೆ ಅವರ ರಾಜಕೀಯ ಜೀವನದಲ್ಲಿ 50 ವರ್ಷಗಳ ಪೂರೈಸಲಿದ್ದಾರೆ. ಅವರು ನನ್ನನ್ನ ನೋಡಿ ಸಂತೋಷವನ್ನ ವ್ಯಕ್ತಪಡಿಸಿದ್ದಾರೆ. ಅವರಿಂದ ಸಲಹೆ ಸೂಚನೆಗಳನ್ನು ಪಡೆದಿದ್ದೇನೆ. ಚಾಮರಾಜನಗರ ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ವಿಚಾರವಾಗಿ ಮಾತಾನಾಡಿ ಸಲಹೆಗಳನ್ನು ಪಡೆದಿದ್ದೇನೆ ಎಂದರು.
ಅವರು ಈಗಾಗಲೇ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವುದರಿಂದ ಮುಂದಿನ ದಿನಗಳಲ್ಲಿ ಅವರ ಸ್ಥಾನಕ್ಕೆ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸೂಕ್ತ ಅಭ್ಯರ್ಥಿ ಕಣಕ್ಕಿಳಿಸುವ ಕೆಲಸವನ್ನು ಪಕ್ಷದ ವರಿಷ್ಠರು ಮಾಡುತ್ತಾರೆ ಎಂದು ಹೇಳುವ ಮೂಲಕ ಬಿವೈ ವಿಜಯೇಂದ್ರ ಗುತ್ತುಬಿಟ್ಟು ಕೊಟ್ಟಿಲ್ಲ.