ಚಾಮರಾಜನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆವಿಚಾರಕ್ಕೆ ಸಂಸದ ವಿ ಶ್ರೀನಿವಾಸಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ.
ನನ್ನ ಇಬ್ಬರು ಅಳಿಯಂದಿರ ಜೊತೆಗೆ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ.ನನಗೆ ನನ್ನ ಅಳಿಯ ಡಾ ಮೋಹನ್ ಟಿಕೆಟ್ ಆಕಾಂಕ್ಷಿ ಎನ್ನುವುದು ಗೊತ್ತಿತ್ತು.
ಈಗ ಹರ್ಷವರ್ಧನ್ ಕೂಡ ಆಕಾಂಕ್ಷಿ ಎಂಬುದು ಗೊತ್ತಾಗಿದೆ. ಈಗ ನಮ್ಮ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳಿದ್ದಾರೆ.ಅವರಿಬ್ಬರೂ ತುಂಬಾ ಅನ್ಯೋನ್ಯವಾಗಿದ್ದಾರೆ.ಯಾರಿಗೆ ಟಿಕೆಟ್ ಕೊಟ್ಟರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆ.
ಚಾಮರಾಜನಗರ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ನನ್ನ ವೈಯುಕ್ತಿಕ ಅಭಿಪ್ರಾಯವನ್ನೂ ವಿಜಯೇಂದ್ರರಿಗೆ ಹೇಳಿದ್ದೇನೆ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದರು.
ಮಾರ್ಚ್ 17ರ ನಂತರ ಚುನಾವಣೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ.ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ಹೋಗುವುದಿಲ್ಲ. ಆದರೆ ಬಿಜೆಪಿಯನ್ನು ಬೆಂಬಲಿಸಿ ಎಂದು ಎಲ್ಲರನ್ನೂ ಕೇಳಿಕೊಳ್ಳುತ್ತೇನೆ ಎಂದರು. ಸಚಿವ ಮಹದೇವಪ್ಪ ಸ್ಪರ್ಧೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು,
ಅವರು ನಮ್ಮವಿರೋಧಿಗಳು, ಅವರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ ಎಂದರು.