ಮೈಸೂರು ವಿಶ್ವ ವಿದ್ಯಾನಿಲಯ 104ನೇ ಘಟಿಕೋತ್ಸವ ಮಾರ್ಚ್ 3ರಂದು ನಡೆಯುವ ಹಿನ್ನಲೆ , ಅಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಹಾಗೂ ಖ್ಯಾತ ಚಲನಚಿತ್ರ ನಿರ್ದೇಶಕ ಟಿ.ಎನ್. ಸೀತಾರಾಮ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ವಿವಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ.

103ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿಗೆ ಎಸ್.ಎಂ. ಕೃಷ್ಣ ರನ್ನ ಆಯ್ಕೆ ಮಾಡಲಾಗಿತ್ತು. ಆದರೆ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆ ಗೌರವ ಡಾಕ್ಟರೇಟ್ ನೀಡುವ ನಿರ್ಧಾರವನ್ನು ತಡೆ ಹಿಡಿಯಲಾಯಿತು. ಆದ್ದರಿಂದ ಈ ಬಾರಿಯ ಘಟಿಕೋತ್ಸವದಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೈಸೂರು ವಿವಿಯ ಮೂಲಗಳಿಂದ ಮಾಹಿತಿ ಸಿಕ್ಕಿದೆ.