ಚಾಮರಾಜನಗರ : ಕೌಟುಂಬಿಕ ಕಲಹಕ್ಕೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕು ಹೊರೆಯಾಲ ಗ್ರಾಮದಲ್ಲಿ ನಡೆದಿದೆ. ಜ್ಯೋತಿ(28) ಬಾಂಧವ್ಯ(7), ಮಾನಸ(3) ಮೃತ ದುರ್ದೈವಿಗಳು.
ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಹೊರಿಯಾಲದ ಯೋಗೇಶ್ ಮತ್ತು ನಂಜನಗೂಡಿನ ಕೋಣನೂರು ಗ್ರಾಮದ ಜ್ಯೋತಿಗೆ ಕಳೆದ 10 ವರ್ಷಗಳ ಹಿಂದೆ ವಿವಾಹವಾಗಿದ್ದರು.
ಬೇಗೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೋಲಿಸರ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.