ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಈಗಾಗಲೇ ಮೊದಲ ಹಂತದಲ್ಲಿ 195 ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು,. ಕರ್ನಾಟಕ ಅಭ್ಯರ್ಥಿಗಳ ಘೋಷಣೆ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, 2ನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳು ಫೈನಲ್ ಆಗಲಿದೆ ಎಂದಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಸಭೆಯಲ್ಲಿ ಭಾಗವಹಿಸುಲು ದೆಹಲಿಗೆ ಹೋಗುತ್ತಿದ್ದೇನೆ. 2ನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳು ಅಂತಿಮವಾಗಬಹುದು. ರಾಜ್ಯದ 28 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ಫೈನಲ್ ಆಗಬಹುದು.ಎಂಪಿ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ನೀಡುವ ವಿಚಾರ, ದೆಹಲಿ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಿಶ್ಷಿತ. ಆದರೆ ಸೀಟು ಹಂಚಿಕೆಯಾಗಿಲ್ಲ ಎಂದು ಯಡಿಯೂರಪ್ಪ ಹೇಳಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಅಭಿಯಾನ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಒಳ್ಳೆಯ ಕೆಲಸ ಮಾಡುವುದನ್ನ ಸಹಿಸದೇ ಈ ರೀತಿ ಮಾಡಿದ್ದಾರೆ. ಇದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು