ಚಾಮರಾಜನಗರ : ಬಿಸಿಲಿನ ತಾಪಮಾನಕ್ಕೆ ಕಾಡ್ಗಿಚ್ಚು ಕಾಣಿಸಿಕೊಂಡು 50 ರಿಂದ 60 ಎಕರೆಯಷ್ಟು ಕಾಡಿನ ನೆಲ ಹಾಸು ಬೆಂಕಿಗಾಹತಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಪುಣಜನೂರು ವಲಯದ ಕೊಡಾರೆ ಪ್ರದೇಶದಲ್ಲಿ ಸಂಭವಿಸಿದೆ.
ಚಾಮರಾಜನಗರ ತಾಲ್ಲೂಕಿನ ಪುಣಜನೂರು ಬಲಿಯ ಕೊಡಾರೆ ಪ್ರದೇಶದ ಕಾಡಿನಲ್ಲಿ ನೆಲಹಾಸಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸೋಮವಾರ ಮದ್ಯಾಹ್ನ ಕಾಣಿಸಿಕೊಂಡ ಬೆಂಕಿಯನ್ನು ಸಂಜೆಯ ತನಕ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ರಾತ್ರಿಯ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ.
ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.