ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಕೂಟ 24, ಕಾಂಗ್ರೆಸ್ 4 ಸ್ಥಾನಗಳನ್ನು ಗೆಲ್ಲಲಿದೆ ಎಂದು ಇಂಡಿಯಾ ಟಿವಿ ಸಿಎನ್ಎಕ್ಸ್ ಸಮೀಕ್ಷೆ ಹೇಳಿದೆ.
ಉತ್ತರ ಕರ್ನಾಟಕ ಒಟ್ಟು 11 ಸ್ಥಾನಗಳ ಪೈಕಿ ಎನ್ಡಿಎ 9, ಕಾಂಗ್ರೆಸ್ 2 ಸ್ಥಾನ ಗೆದ್ದರೆ ಕರಾವಳಿಯ ಭಾಗದ ಮೂರು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ. ದಕ್ಷಿಣ ಕರ್ನಾಟಕದಲ್ಲಿ ಎನ್ಡಿಎ 8, ಕಾಂಗ್ರೆಸ್ 1 ಸ್ಥಾನ ಗೆದ್ದರೆ ಬೆಂಗಳೂರಿನಲ್ಲಿ ಎನ್ಡಿಎ 4, ಕಾಂಗ್ರೆಸ್ 1 ಸ್ಥಾನ ಗೆಲ್ಲಲಿದೆ ಎಂದು ವರದಿ ಮಾಡಿದೆ.
ದಕ್ಷಿಣ ಭಾರತದ ಒಟ್ಟು 130 ಕ್ಷೇತ್ರಗಳ ಪೈಕಿ ಕರ್ನಾಟಕದಲ್ಲಿ ಎನ್.ಡಿ. ಎ ಅತಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಇಂಡಿಯಾ ಟಿವಿ ಸಿ.ಎನ್.ಎಕ್ಸ್ ಸಮೀಕ್ಷೆ ವರದಿ ಮಾಡಿದ್ದು, ಈ ಬಾರಿಯೂ ಕರ್ನಾಟಕದಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನಕ್ಕೆ ತೃಪ್ತಿಪಡಬೇಕಿದೆ.