ಮೈಸೂರು : ಪ್ರತಿಯೊಬ್ಬರು 60:40 ಅನುಪಾತದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಮಾಡಲೇಬೇಕು ಎಂದು ಕನ್ನಡ ಚಳವಳಿ ಮುಖಂಡ ವಾಟಾಳ್ ನಾಗರಾಜ್ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, 60:40 ಅನುಪಾತದಲ್ಲಿ ನಾಮಫಲಕಗಳನ್ನು ಅಳವಡಿಸುವಂತೆ ರಾಜ್ಯ ಸರ್ಕಾರ ಕಾಯ್ದೆ ಜಾರಿಗೊಳಿಸಿದೆ.
ಆದರೂ ಬಹುತೇಕ ಕಡೆ ಇನ್ನೂ ಇದು ಅನುಷ್ಠಾನಕ್ಕೆ ಬಂದಿಲ್ಲ.ಈ ಸಂಬಂಧ ಬರುವ ಭಾನುವಾರ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ಜನಜಾಗೃತಿ ಮೂಡಿಸಲಾಗುವುದು.ಎಲ್ಲಾ ಮಳಿಗೆದಾರರು, ಉದ್ಯಮಿಗಳು ಕನ್ನಡ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು.ಸರೋಜಿನಿ ಮಹಿಷಿ ವರದಿ ಪ್ರಕಾರ ಕನ್ನಡಿಗರಿಗೆ ಉದ್ಯೋಗ ನೀಡಬೇಕು.
ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.