ಮೈಸೂರು : ಬ್ಯಾಂಕ್ ಶೌಚಾಲಯದ ಗೋಡೆಗೆ ಕನ್ನ ಹಾಕಿ ದರೋಡೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ದೊಡ್ಡೇಬಾಗಿಲು ಗ್ರಾಮದಲ್ಲಿ ನಡೆದಿದೆ.SBI ಬ್ಯಾಂಕ್ ಗೆ ಕನ್ನ ಹಾಕಿದ ಖದೀಮರು ವಿಫಲರಾಗಿ ಬರಿಗೈಲಿ ಹಿಂದಿರುಗಿದ್ದಾರೆ.ಬ್ಯಾಂಕ್ ನ ಶೌಚಾಲಯದ ಗೋಡೆಗೆ ಕನ್ನ ಹಾಕಿ ಒಳ ಪ್ರವೇಶಿಸಿರುವ ಖದೀಮರು ಸಿಸಿ ಕ್ಯಾಮರಾ ಹಾನಿಗೊಳಿಸಿ ಲಾಕರ್ ತೆರೆಯುವ ಯತ್ನ ನಡೆಸಿ ವಿಫಲರಾಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಾಬು ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೃತ್ಯ ನಡೆದ ಬ್ಯಾಂಕ್ ಗೆ ಶ್ವಾನ ದಳ ಹಾಗೂ ಬೆರಳುಮುದ್ರೆ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಬ್ಯಾಂಕ್ ನಲ್ಲಿ ಅಳವಡಿಸಲಾದ ಸಿಸಿ ಕ್ಯಾಮರಾದಲ್ಲಿ ದುಷ್ಕರ್ಮಿಗಳ ಚಲನವಲನ ಸೆರೆಯಾಗಿದೆ ಎಂದು ಹೇಳಲಾಗಿದೆ.ಟಿ.ನರಸೀಪುರ ಠಾಣೆ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.