ಮೈಸೂರು : ಕೇಂದ್ರ ಸರ್ಕಾರ ಪುರಸ್ಕೃತ ಪ್ರಸಾದ್ ಮತ್ತು ಸ್ವದೇಶ್ ದರ್ಶನ್ ಯೋಜನೆ ಅಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಸಿಕ್ಕಿದೆ.
ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿಯ ದೇವಸ್ಥಾನದ ಅಭಿವೃದ್ಧಿ, ಇಕೋಲಾಜಿಕಲ್ ಎಕ್ಸ್ಪೀರಿಯನ್ಸ್ ಜೋನ್, ಟಾಂಗ ರೈಡ್ ಹೆರಿಟೇಜ್ ಎಕ್ಸ್ಪೀರಿಯನ್ಸ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.
ಪ್ರವಾಸೋದ್ಯಮ ಮಂತ್ರಾಲಯ ಭಾರತ ಸರ್ಕಾರ ಮತ್ತು ಮೈಸೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಗಳ ಸಹಯೋಗದೊಂದಿಗೆ ಜರುಗಿದ ಕಾರ್ಯಕ್ರಮ.
ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸ್ ವರ್ಚುವಲ್ ಮೂಲಕ ಶಂಕುಸ್ಥಾಪನೆ.
ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಆಂಪಿಥಿಯೇಟರ್ ನಲ್ಲಿ ಜರುಗಿದ ಶಂಕುಸ್ಥಾಪನಾ ಕಾರ್ಯಕ್ರಮ. ಚಾಮುಂಡಿ ಬೆಟ್ಟದಲ್ಲಿ 45.70 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ, ದಸರಾ ವಸ್ತು ಪ್ರದರ್ಶನ ಮತ್ತು ಮೃಗಾಲಯದ ಅಭಿವೃದ್ದಿಯ 80 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ.
ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದ ಸಂಸದ ಪ್ರತಾಪ್ ಸಿಂಹ.
ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಶ್ರೀವತ್ಸ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಪೋಲಿಸ್ ಕಮೀಷನರ್ ರಮೇಶ್ ಬಾನೋತ್, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ, ಮೃಗಾಲಯದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಸೇರಿದಂತೆ ಇನ್ನಿತರ ಪ್ರಮುಖರು ಭಾಗಿ.