ಚಾಮರಾಜನಗರ: ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳ ಹಾಗೂ ಪವಾಡ ಪುರುಷ ಮಲೆ ಮಹದೇಶ್ವರ ನೆಲೆಸಿರುವ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ ರಥೋತ್ಸವ ನಡೆಯುತ್ತಿದೆ.
ಸೋಮವಾರ ಮಹದೇಶ್ವರ ಬೆಟ್ಟದಲ್ಲಿ ಸಾವಿರಾರು ಭಕ್ತರು ಜಮಾಯಿಸಿದ್ದರು. ಸಾಲೂರು ಮಠಾಧಿಪತಿ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ಕಾರ್ಯದರ್ಶಿ ರಘು ನೇತೃತ್ವದಲ್ಲಿ ರಥೋತ್ಸವ ಅದ್ದೂರಿಯಾಗಿ ಜರುಗಿತು.
ಸುಡು ಬಿಸಿಲಿನಲ್ಲೂ ನೆರೆದಿದ್ದ ಭಕ್ತರು ಉಘೇ ಮಾದಪ್ಪ ಎನ್ನುವ ಘೋಷವನ್ನು ಕೂಗುತ್ತಾ ಮಹದೇಶ್ವರನ ಸ್ಮರಣೆ ಮಾಡಿದರು. ರಥೋತ್ಸವ ಹಿನ್ನಲೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಬಿಗಿಯಾದ ಪೊಲೀಸ್ ಬಂದೂಬಸ್ತ್ ಮಾಡಲಾಗಿತ್ತು.