ಕೇಂದ್ರದಲ್ಲಿ ಇದುವರೆಗೂ ಅಭ್ಯರ್ಥಿ ಯಾರೆಂಬುದು ಅಂತಿಮವಾಗಿಲ್ಲ. ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಸುದ್ದಿಗೋಷ್ಠಿ ಕರೆದಿದ್ದೇವೆ. ಮೈಸೂರು ಅರಸರ ಕೊಡುಗೆಗಳ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಚಿವ ರಾಮದಾಸ್ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯದುವೀರ್ ಒಡೆಯರ್ ರವರು ಜನರ ಜೊತೆ ಬೆರಿತಾರ ಇಲ್ಲವಾ ಎಂಬುದನ್ನ ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ. ಪ್ರತಾಪ್ ಸಿಂಹಗೆ ಪರೋಕ್ಷವಾಗಿ ರಾಮದಾಸ್ ಕಿವಿ ಹಿಂಡಿದರು
ರಾಮದಾಸ್ ರವರು ಪಕ್ಷಕ್ಕಾಗಿ ಕೆಲಸ ಮಾಡಿದ್ದರು ಎಂದು ಪ್ರತಾಪ್ ಸಿಂಹರವರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವತ್ತಿಗೂ ನಮಗೆ ಪ್ರತಾಪ್ ಸಿಂಹ ಲೀಡರ್. ಅವರಿಗೆ ಗೌರವ ಕೊಟ್ಟೆ ಕೊಡುತ್ತೇವೆ. ಅವರಿಗೆ ಟಿಕೆಟ್ ಕೊಟ್ಟರು ಕೆಲಸ ಮಾಡುತ್ತೇವೆ. ನಾನು ಇನ್ನೊಬ್ಬರಿಗೆ ಪಾಠ ಮಾಡುವಷ್ಟು ದೊಡ್ಡವನಲ್ಲ. ನಾನು ಸೋತ ಬಳಿಕವು ಪಕ್ಷದ ಕೆಲಸ ಕಾರ್ಯಗಳನ್ನ ಮಾಡಿದ್ದೇನೆ ಎಂದರು.