ಚಾಮರಾಜನಗರ : ತಮಿಳುನಾಡಿಗೆ ಕಾವೇರಿ ನದಿಯಿಂದ ಕದ್ದು ಮುಚ್ಚಿ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಚಾಮರಾಜನಗರದ ಎಲ್ ಐ ಸಿ ವೃತ್ತದ ಬಳಿ ಮುಖ್ಯಮಂತ್ರಿಗಳ ಆಗಮನದ ವೇಳೆ ಪ್ರತಿಭಟನೆ ನಡೆಸಿದರು.
ಚಾಮರಾಜನಗರದ ಎಲ್ ಐ ಸಿ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಿದ್ದಂತೆ ಸ್ಥಳಕ್ಕಾಗಮಿಸಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕಾರ್ಯಕ್ರಮ ಮುಗಿಯುವ ತನಕ ಪಟ್ಟಣದಿಂದ ಹೊರ ವಲಯಕ್ಕೆ ಕರೆದುಕೊಂಡು ಹೋದರು.
ಪ್ರತಿಭಟನೆಯ ಸುಳಿವು ದೊರೆತ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ತಮ್ಮ ಚಾಮರಾಜನಗರಕ್ಕೆ ಕೊಂಚ ತಡವಾಗಿ ಬೇರೆ ಮಾರ್ಗದಲ್ಲಿ ವೇದಿಕೆಗೆ ಆಗಮಸಿ ಗ್ಯಾರಂಟಿ ಯೋಜನಗೆಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಸಿದರು.