ಮೈಸೂರು : ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ. ನಾನು ಪಕ್ಷದ ಕಟ್ಟಾಳು. ಯಾರು ಏನೇ ಕೊಡ್ತೀನಿ ಅಂದರೂ ನಾನು ಎಲ್ಲೂ ಹೋಗಲ್ಲ. ಸಾಯೋವರೆಗೂ ನಾನು ಬಿಜೆಪಿ ಕಾರ್ಯಕರ್ತ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸಂಸದ ಪ್ರತಾಪ್ ಸಿಂಹಗೆ ಪತ್ರಕರ್ತರ ಭವನದಲ್ಲಿ ಅಭಿನಂದನಾ ಸಮಾರಂಭ ನಡೆಯಿತು. ಬಳಿಕ ಮಾತನಾಡಿದ ಅವರು, ಮೋದಿಜೀ ಗೆ ನನಗೆ ಸದಾ ಪ್ರೇರಣೆ, ಸ್ಪೂರ್ತಿ. ಮೋದಿಜಿ ಏನೇ ನಿರ್ಧಾರ ತೆಗೆದು ಕೊಂಡರು ನಾನು ಅದನ್ನು ಸ್ವೀಕರಿಸುತ್ತೇನೆ. ಮೋದಿಗಿಂತ ದೊಡ್ಡದು ಯಾವುದೂ ಇಲ್ಲ. ಅವಕಾಶ ಮಾಡಿಕೊಟ್ಟರು ತೃಪ್ತಿ ಇದೆ. ಮಾಡದೆ ಇದ್ದರೂ ತೃಪ್ತಿ ಇದೆ. ಟಿಕೆಟ್ ವಿಚಾರದಲ್ಲಿ ಯಡಿಯೂರಪ್ಪ ಅವರನ್ನು ಎಳೆದು ತರಬೇಡಿ ಎಂದು ಮನವಿ ಮಾಡಿಕೊಂಡರು.
ಯಡಿಯೂರಪ್ಪ ಅವರು ಪಕ್ಷ ಕಟ್ಟದೆ ಇದ್ದರೆ ಕರ್ನಾಟಕದಲ್ಲಿ ಬಿಜೆಪಿ ಎಲ್ಲಿ ಇರುತ್ತಿತ್ತು?. ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿಯನ್ನು ಯಡಿಯೂರಪ್ಪ ಅವರು ಕಟ್ಟದೆ ಇದ್ದರೆ ನಮ್ಮಂಥವರು ಸಂಸದ ಆಗೋದಿಕ್ಕೆ ಆಗುತ್ತಿತ್ತಾ?. ಕರ್ನಾಟಕಕ್ಕೆ ಯಡಿಯೂರಪ್ಪ ಅವರು ಒಂಥರ ಮೋದಿ ಇದ್ದ ರೀತಿ ಎಂದರು.
ಟಿಕೆಟ್ ಸಿಕ್ಕರೆ ಎಂಪಿ ಆಗುತ್ತೇನೆ ಇಲ್ಲದಿದ್ದರೆ ಬಿಜೆಪಿ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ಕೊನೆಯವರೆಗೂ ದುಡಿಯುತ್ತೇನೆ ನನಗೆ ಯಾವುದೇ ಬೇಸರವಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.