ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಎಲ್ಲೇಮಾಳ ಗ್ರಾಮದ ಸಮೀಪ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ತಿರುವು ಒಂದರಲ್ಲಿ ಬೆಂಗಳೂರು ಮೂಲದವರು ತಡರಾತ್ರಿ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುವ ಸಂದರ್ಭದಲ್ಲಿ ಕಾರು ಪಲ್ಟಿ ಹೊಡೆದು ಈ ಅವಘಡ ಸಂಭವಿಸಿದೆ.
ಕಾರಿನ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತವಾಗಿದೆ. ಕಾರಿನಲ್ಲಿದ್ದವರಿಗೆ ಅಲ್ಲಿನ ರಕ್ತದ ಕಲೆ ನೋಡಿ ಸವಾರರಿಗೆ ಗಂಭೀರ ಗಾಯಗಳಾಗಿದೆ ಎಂದು ಸ್ಥಳೀಯರ ಮಾತಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಹನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.