ಮೈಸೂರು : ಗೃಹಬಳಕೆ ಸಿಲಿಂಡರ್ ಗಳಿಂದ ವಾಣಿಜ್ಯ ಸಿಲಿಂಡರ್ ಗಳಿಗೆ ಅಕ್ರಮವಾಗಿ ರೀಫಿಲ್ಲಿಂಗ್ ಮಾಡುತ್ತಿದ್ದ
ನಾಲ್ವರು ಆರೋಪಿಗಳ ಬಂಧನವಾಗಿದೆ.
ವಿಜಯನಗರ ಪೊಲೀಸರ ಕಾರ್ಯಾಚರಣೆಯಿಂದ
ಬಂಧಿತರಿಂದ ವಿವಿದ ಗ್ಯಾಸ್ ಕಂಪನಿಯ ಗೃಹಬಳಕೆ ಹಾಗೂ ವಾಣಿಜ್ಯ ಬಳಕೆಯ 95 ಸಿಲಿಂಡರ್ ಗಳನ್ನ ವಶಕ್ಕೆ ಪಡೆಯಲಾಗಿದ್ದು, ಗ್ಯಾಸ್ ರೀಫಿಲ್ಲಿಂಗ್ ಗಾಗಿ ಬಳಸುತ್ತಿದ್ದ ವಸ್ತುಗಳು ಮತ್ತು ಎರಡು ವಾಹನವನ್ನು ಸಹ ವಶಕ್ಕೆ ಪಡೆದಿದ್ದಾರೆ.
ಸುನಿಲ್ ಕುಮಾರ್ ದಿನೇಶ್ ಕೈಲಾಸ್ ಸುಭಾಷ್ ಭಿಷ್ಣೋಯಿ ಬಂಧಿತ ಆರೋಪಿಗಳು.
ಮೈಸೂರಿನ ವಿಜಯನಗರ ನಾಲ್ಕನೇ ಹಂತದ ಖಾಲಿ ನಿವೇಶನದಲ್ಲಿ ಅಕ್ರಮವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದರು. ಕಾರ್ಯಾಚರಣೆಯಲ್ಲಿ ಪೊಲೀಸರಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳು ಸಾಥ್ ನೀಡಿದ್ದಾರೆ.ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.