ಮೈಸೂರು : ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಸೂರು ಮತ್ತು ಪಟ್ಟಣ ಪಂಚಾಯಿತಿ ಬೋಗಾದಿ ಇವರ ವತಿಯಿಂದ ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜಟ್ಟಿಹುಂಡಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ-2024 ರ ಪ್ರಯುಕ್ತ ಚುನಾವಣೆ ಪರ್ವ ದೇಶದ ಗರ್ವ ಎಂಬ ಶೀರ್ಷಿಕೆಯಡಿ ಕಡ್ಡಾಯವಾಗಿ ಮತದಾನ ಮಾಡುವಂತೆ ಕುಂಭ ಮೇಳದ ಜೊತೆಗೆ ಅರಿವು ಮತ್ತು ಜಾಥಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ. ಗಾಯತ್ರಿ ಚಾಲನೆ ನೀಡಿದರು.
ಮಹಿಳೆಯರಿಗೆ, ಗ್ರಾಮಸ್ಥರಿಗೆ ಮನೆ ಮನೆಗೆ ತೆರಳಿ ಮತದಾನವನ್ನು ಕಡ್ಡಾಯವಾಗಿ ಮಾಡುವಂತೆ ಕರ ಪತ್ರಗಳನ್ನು ನೀಡುವ ಮೂಲಕ ಅರಿವು ಮೂಡಿಸಿಮತ್ತು ಮಾನವ ಸರಪಳಿ ನಿರ್ಮಿಸಿ ಚುನಾವಣಾ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಉಪನಿರ್ದೇಕರಾದ ಹೆಚ್. ಆರ್.ಸುರೇಶ್ , ಜಿಲ್ಲಾ ನಿರೂಪಣಾಧಿಕಾರಿಗಳಾದ ಡಿ. ಮಂಜುನಾಥ, ಮೈಸೂರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ತಿಬ್ಬಯ್ಯ , ಪಟ್ಟಣ ಪಂಚಾಯತ್ ನ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿ ಯಶಸ್ವಿಗೊಳಿಸಿದರು.