ಪರಿವಾರ-ತಳವಾರ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದಲ್ಲದೆ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿರುವ ಕಾರಣ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ಬೆಂಬಲಕ್ಕೆ ನಿಲ್ಲಲು ಬಿಜೆಪಿ ಎಸ್ಟಿ ಮುನ್ನಡೆ ಸಮಾವೇಶದಲ್ಲಿ ಒಕ್ಕೊರಲಿನಿಂದ ತೀರ್ಮಾನಿಸಲಾಯಿತು.
ಲಕ್ಷ್ಮೀಪುರಂ ನೇರಂಬಳ್ಳಿ ಸಾವಿತ್ರಮ್ಮ ಕಲ್ಯಾಣಮಂಟಪದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ಎಸ್ಟಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಪಂಗಡ ಮುನ್ನಡೆ ಸಮಾವೇಶದಲ್ಲಿ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಪರಿಶಿಷ್ಟ ವರ್ಗಗಳಿಗೆ ಜಾರಿಗೆ ತಂದಿರುವ ಕಲ್ಯಾಣ ಕಾರ್ಯಕ್ರಮಗಳು, ಪರಿವಾರ ಮತ್ತು ತಳವಾರ ಪದವನ್ನು ಎಸ್ಟಿಗೆ ಸೇರಿ 40ವರ್ಷಗಳಿಂದ ಇದ್ದ ಸಮಸ್ಯೆಯನ್ನು ನಿವಾರಣೆ ಮಾಡಿದ್ದನ್ನು ಪ್ರಸ್ತಾಪಿಸುವ ಜತೆಗೆ, ಶೇ.3.5 ರಿಂದ 7.5ಕ್ಕೆ ಮೀಸಲಾತಿ ಹೆಚ್ಚಿಸಿದ ಬಸವರಾಜ ಬೊಮ್ಮಾಯಿ ಸರ್ಕಾರದ ತೀರ್ಮಾನದಿಂದ ಆಗಿರುವ ಅನುಕೂಲಗಳನ್ನು ಗಮನಿಸಿ ಈ ನಿರ್ಧಾರ ಮಾಡಲಾಯಿತು.
ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ ವಾಲ್, ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್, ಮಾಜಿ ಸಚಿವ ಎಸ್.ಎ.ರಾಮದಾಸ್, ಎನ್.ಮಹೇಶ್, ಶಾಸಕ ಟಿ.ಎಸ್. ಶ್ರೀವತ್ಸ, ಎ ಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತ, ಮಾಜಿ ಮಹಾಪೌರ ಶಿವಕುಮಾರ್, ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಕೇಂದ್ರೀಯ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ನಗರಾಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಎಸ್ಟಿ ಮೋರ್ಚಾ ನಗರಾಧ್ಯಕ್ಷ ಪಡುವಾರಹಳ್ಳಿ ರಾಮಕೃಷ್ಣ ಮೊದಲಾದವರ ಸಮ್ಮುಖದಲ್ಲಿ ಪರಿಶಿಷ್ಟ ಪಂಗಡಕ್ಕೆ ಆಗಿರುವ ಅನುಕೂಲಗಳ ಬಗ್ಗೆ ವೀಡಿಯೋ ಪ್ರದರ್ಶಿಸಲಾಯಿತು