ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕೊನೆಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್‌ಬೋಸ್‌ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಅಧಿಕೃತ ಪ್ರಕಟಣೆಯಷ್ಟೇ ಬಾಕಿ ಇದೆ. ಕಾಂಗ್ರೆಸ್ ಟಿಕೆಟ್‌ಗೆ ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಅವರ ಪ್ರಬಲ ಪೈಪೋಟಿ ಒಡ್ಡಿದ್ದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕೊನೆಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್‌ಬೋಸ್‌ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಅಧಿಕೃತ ಪ್ರಕಟಣೆಯಷ್ಟೇ ಬಾಕಿ ಇದೆ. ಕಾಂಗ್ರೆಸ್ ಟಿಕೆಟ್‌ಗೆ ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಅವರ ಪ್ರಬಲ ಪೈಪೋಟಿ ಒಡ್ಡಿದ್ದರು. ನಂಜುಂಡಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಟ್ಟಾ ಬೆಂಬಲಿಗರು. ಈ ಕ್ಷೇತ್ರದಿಂದ ಡಾ.ಮಹದೇವಪ್ಪ ಅವರೇ ಕಣಕ್ಕಿಳಿಯಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್‌ಅವರ ಆಶಯವಾಗಿತ್ತು.
ಇಲ್ಲದಿದ್ದರೆ ಮಾಜಿ ಸಂಸದ ದಿ.ಆರ್. ಧ್ರುವನಾರಾಯಣ ಅವರ ಪುತ್ರ, ಹಾಲಿ ನಂಜನಗೂಡು ಶಾಸಕ ದರ್ಶನ್‌ಅವರಿಗೆ ಟಿಕೆಟ್‌ನೀಡುವ ಉದ್ದೇಶವಿತ್ತು. ಆದರೆ ದರ್ಶನ್‌ಸ್ಪರ್ಧೆಗೆ ಆಸಕ್ತಿ ತೋರಲಿಲ್ಲ. ಇದಲ್ಲದೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅರ್ಧದಷ್ಟು ಕಡೆ ಕಾಂಗ್ರೆಸ್‌ಸಚಿವರು, ಶಾಸಕರ ಸಂಬಂಧಿಕರಿಗೆ ಟಿಕೆಟ್‌ನೀಡಿದೆ. ಹೀಗಾಗಿ ಇಲ್ಲಿ ಕೂಡ ತಮ್ಮ ಪುತ್ರನಿಗೆ ಟಿಕೆಟ್‌ನೀಡಬೇಕು ಎಂದು ಮಹದೇವಪ್ಪ ಪಟ್ಟು ಹಿಡಿದಿದ್ದರು. ಕೊನೆಗೆ ಸಫಲರಾಗಿದ್ದಾರೆ. 1991 ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಮಹದೇವಪ್ಪ ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇದೀಗ 33 ವರ್ಷಗಳ ನಂತರ ಅವರ ಪುತ್ರ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.