ನಂಜುಂಡನ ದರ್ಶನ ಪಡೆದ ಮಾಜಿ ಸಿಎಂ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ರವರು ನಂಜನಗೂಡಿನಲ್ಲಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.
ಚುನಾವಣೆಯ ಸಂದರ್ಭಗಳಲ್ಲಿ ನಂಜುಂಡೇಶ್ವರನ ಪ್ರಸಾದ ಪಡೆಯುವುದು ಕುಟುಂಬದ ವಾಡಿಕೆ.
ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಜೊತೆಗೂಡಿ ನಂಜುಂಡನ ದರುಶನ ಪಡೆದಿದ್ದಾರೆ.
ಪ್ರತಿ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಸೇರಿದಂತೆ ಇಡೀ ಕುಟುಂಬ ನಾಮಪತ್ರ ಸಲ್ಲಿಸುವ ಮುನ್ನ ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಬಂದು ದೇವರ ದರ್ಶನ ಮಾಡಿ ಪ್ರಸಾದ ಪಡೆದ ಬಳಿಕ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳುವುದು ಸಾಕಷ್ಟು ವರ್ಷಗಳ ನಂಬಿಕೆಯಾಗಿದೆ.ಈ ಹಿನ್ನಲೆ ಇಂದು ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಎಚ್ ಡಿ ಕುಮಾರಸ್ವಾಮಿ ನಂಜುಂಡೇಶ್ವರನ ವರ ಪಡೆದು ಲೋಕಸಭಾ ಚುನಾವಣೆಯ ಗೆಲುವಿಗಾಗಿ ಹರಕೆ ಹೊತ್ತು ಹೊರ ನಡೆದಿದ್ದಾರೆ. ಅನಾರೋಗ್ಯ ನಿಮಿತ್ತ ಜನ್ಯ ಜನರ ಸೇವೆಗೆ ಅವಕಾಶ ಕಲ್ಪಿಸಿದರೆ ತುಲಾ ಬರ ನೆರವೇರಿಸುತ್ತೇನೆ ಎಂದು ನಂಜುಂಡನಿಗೆ ಹರಕೆ ಹೊತ್ತಿದ್ದರು ಅದರಂತೆ ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ ದೇವರ ದರ್ಶನ ಪಡೆದು, ತುಲಾ ಭಾರವನ್ನು ನೆರವೇರಿಸಿ ತಮ್ಮ ಹರಕೆಯನ್ನು ತೀರಿಸಿದ್ದಾರೆ.
ಈ ವೇಳೆ ಶಾಸಕ ಜಿ ಟಿ ದೇವೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ಹಲವಾರು ಭಾಗವಹಿಸಿದ್ದರು.