ಮೈಸೂರು : ಏಪ್ರಿಲ್ 3 ರಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪ ಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್ ಶಾಸಕರುಗಳು, ಮುಖಂಡರು ಸೇರಿ ಹಲವರು ಭಾಗಿಯಾಗಲಿದ್ದಾರೆ. ಈ ಬಗ್ಗೆಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

