ಮೈಸೂರು: ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕಾರ್ಯ ಅವಿಸ್ಮರಣೀಯವಾದದ್ದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅರ್ಧ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾ. ಆರ್ಎಚ್ ಪವಿತ್ರ ಹೇಳಿದರು.
ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿ ಇರುವ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ
ಡಾ. ಶಿವಕುಮಾರ ಸ್ವಾಮೀಜಿಯವರ 117 ನೇ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ , ಆನಂತರ ಭಕ್ತಾದಿಗಳಿಗೆ ಮಜ್ಜಿಗೆ ವಿತರಣೆ ಮಾಡಿದರು ಬಲಿಕ 40 ಜನ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ತ್ರಿವಿಧ ದಾಸೋಹದ ಮೂಲಕ ದೇಶದಲ್ಲಿ ಬಸವ ತತ್ವ ಭಿತ್ತಿ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ದಾಖಲಿಸುವಂತಹ ಸಾಧನೆ ಮಾಡಿರುವ ಶಿವಕುಮಾರ ಸ್ವಾಮೀಜಿಗಳು ಮನುಕುಲಕ್ಕೆ ಮಾದರಿ’ ಎಂದು ಬಣ್ಣಿಸಿದರು.
ನಂತರ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್ ಸ್ವಾಮೀಜಿಯು ಧರ್ಮ, ಜಾತಿ, ವರ್ಣ ಭೇದವಿಲ್ಲದೆ ಲಕ್ಷಾಂತರ ಮಂದಿಗೆ ಶಿಕ್ಷಣ ನೀಡುವ ಮೂಲಕ ಜ್ಞಾನದ ಬೆಳಕು ತೋರಿದರು. ಕೊನೆಯ ಉಸಿರಿರುವವರೆಗೂ ತಮ್ಮ ಬದುಕನ್ನು ಸಮಾಜ ಸೇವೆಗೆ ಮುಡುಪಾಗಿಟ್ಟ ಅವರು ಮಹಾನ್ ಮಾನವತಾವಾದಿ. ಸಿದ್ಧಗಂಗಾ ಮಠದಲ್ಲಿ ಶಿಕ್ಷಣ ಪಡೆದ ಬಹುತೇಕ ಮಂದಿ ಉನ್ನತ ಸ್ಥಾನಗಳಲಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ’ ಎಂದು ತಿಳಿಸಿದರು.
ನಂತರ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಅಪರೂಪದ ತಪಸ್ವಿ: ‘ಸ್ವಾಮೀಜಿಯು ಶಿಕ್ಷಣದ ಮಹತ್ವ ತಿಳಿದು ರಾಜ್ಯದಲ್ಲಿ ಅಕ್ಷರ ಕ್ರಾಂತಿ ಮಾಡಿದರು. ಸರಳ ಸಜ್ಜನಿಕೆಯ ಅವರು ವಿವಿಧ ಕ್ಷೇತ್ರಗಳ ಅಭಿವೃದ್ಧಿಗೂ ಕೊಡುಗೆ ನೀಡಿದ್ದಾರೆ. ಜಾತ್ಯಾತೀತ ತತ್ವ ಮೈಗೂಡಿಸಿಕೊಂಡಿದ್ದ ಶ್ರೀಗಳು ನಿಜಕ್ಕೂ ಪವಾಡ ಪುರುಷರು. ಬಸವಣ್ಣರ ತತ್ವಾದರ್ಶ ಕಾರ್ಯರೂಪಕ್ಕೆ ತಂದ ಅಪರೂಪದ ತಪಸ್ವಿ’ ಎಂದು ಅಭಿಪ್ರಾಯಪಟ್ಟರು.
ವಿಜಯ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡಿಕೆರೆ ಗೋಪಾಲ್, ಹೋಟೆಲ್ ಮಲಿಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ,ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅರ್ಧ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾಕ್ಟರ್ ಆರ್ ಎಚ್ ಪವಿತ್ರ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಬಿಜೆಪಿ ಮುಖಂಡರಾದ ಸರಸ್ವತಿ ಪ್ರಸಾದ್, ಕೇಬಲ್ ವಿಜಿ, ಹೇಮಂತ್, ಚಂದ್ರು, ರಶ್ಮಿ, ಗಣೇಶ್ ಬಾವುಸಾರ್, ರಶ್ಮಿ, ಗಣೇಶ್, ಹಾಗೂ ಇನ್ನಿತರರು ಹಾಜರಿದ್ದರು