ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ವಿರುದ್ಧ ಗೋ ಬ್ಯಾಕ್ ಪೋಸ್ಟರ್ ಅಂಟಿಸಿದ ವಿಚಾರಕ್ಕೆ ಸಂಬಂಧಿಸಿಂತೆ ಪ್ರತಿಕ್ರಿಯಿಸಿರುವ ಸಚಿವ ಹೆಚ್.ಸಿ ಮಹದೇವಪ್ಪ, ಇದು ತಲೆ ಕೆಟ್ಟವರು ಮಾಡಿರುವ ಪಿತೂರಿ ಎಂದು ಕಿಡಿಕಾರಿದ್ದಾರೆ.
ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಪುತ್ರ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, 8 ವಿಧಾನಸಭಾ ಕ್ಷೇತ್ರದ ಜನರು ಎಲ್ಲರೂ ಭಾಗಿಯಾಗಿದ್ದಾರೆ. ಸಿಎಂ ಸೇರಿ ರಾಜ್ಯದ ಪ್ರಮುಖ ನಾಯಕರು ಬಂದು ಬೆಂಬಲಿಸಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ನಲ್ಲಿ ಉತ್ಸುಕ ಅಲೆ ಇದೆ ಎಂದರು.
ಗೋ ಬ್ಯಾಕ್ ಪೋಸ್ಟರ್ ವಿಚಾರ. ಯಾರೋ ಒಬ್ಬ ತಲೆ ಕೆಟ್ಟವನು ಮಾಡಿರೋ ಪಿತೂರಿ. ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳೋ ಅವಶ್ಯಕತೆಯೇ ಬರೋದಿಲ್ಲ. 8 ವಿಧಾನಸಭಾ ಕ್ಷೇತ್ರಗಳಲ್ಲೂ ಸಭೆ ನಡೆಸಿದ್ದೇವೆ. ಉತ್ತಮ ಸ್ಪಂದನೆ ಸಿಕ್ಕಿದೆ. ಯಾರೋ ಒಬ್ಬ ಗೋ ಬ್ಯಾಕ್ ಅಂತಾ ಹೇಳಿದ ತಕ್ಷಣ ಸುನೀಲ್ ಬೋಸ್ ನಾ ವಿರೋಧಿಸಲು ಸಾಧ್ಯವಿಲ್ಲ ಎಂದು ಹೆಚ್.ಸಿ ಮಹದೇವಪ್ಪ ತಿಳಿಸಿದರು.