ಚಾಮರಾಜನಗರ : ಅಬ್ಕಾರಿ ಅಧಿಕಾರಿಗಳು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಸದದಲ್ಲಿರುವ ಇಮ್ಮಾವು ಬಳಿ ದಾಸ್ತಾನುಗಿಂತ ಹೆಚ್ಚುವರೊಯಾಗಿ ಶೇಖರಿಸಿದ್ದ 98 ಕೋಟಿ ರೂ ಹೆಚ್ಚು ಮೊತ್ತದ ಮದ್ಯವನ್ನು ವಶ ಪಡಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ 17 ಆರೋಪಿಗಳನ್ನು ಗುರುತಿಸಲಾಗುದ್ದು, ಅವರೆಲ್ಲರೂ ತಲೆ ಮರೆಸಿಕೊಂಡಿದ್ದು, ಅವರುಗಳ ಬಂಧನಕ್ಕೆ ಜಿಲ್ಲಾಧಿಕಾರಿಗಳ ಅನುಮತಿ ಕೋರಿದ್ದಾರೆ.
ನಂಜನಗೂಡು ತಾಲ್ಲೂಕು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆ ವ್ಯಾಪ್ತಿಗೆ ಬರುವ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿ ಕೋರಿದ್ದಾರೆ.