ಚಾಮರಾಜನಗರ : ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಗ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ತಾಲ್ಲೂಕಿನ ಪಣಕಳ್ಳಿ ಗ್ರಾಮದಲ್ಲಿ ರೈತರು ಬೆಳೆದಿದ್ದ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸುಟ್ಟು ಕರಕಲಾದ ಘಟನೆ ಭಾನುವಾರ ಸಂಜೆ ನಡೆದಿದೆ.
ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ತಾಲ್ಲೂಕಿನ ಪಣಕಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅನಾಹುತಕ್ಕೆ ರೈತರು ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿದ್ದು, ರೈತರು ಕಂಗಲಾಗಿದ್ದಾರೆ.
ತಮಿಳುನಾಡಿನಲ್ಲಿ ಮಿತಿ ಮೀರಿದ ಉಷ್ಣಾಂಶ ಹಿನ್ನಲೆಯಲ್ಲಿ ಹಾಗೂ ಆಕಸ್ಮಿಕ ಬೆಂಕಿ ಕಿಡಿ ಬಿದ್ದಿರುವ ಬಗ್ಗೆ ಶಂಕೆಯಾಗಿದ್ದು, ಬೆಳೆ ಕಳೆದುಕೊಂಡ ರೈತರು ಮಾತ್ರ ಕಂಗಲಾಗಿದ್ದಾರೆ.