ಮೈಸೂರು : ಬರಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಚ್ ಎ ವೆಂಕಟೇಶ್ ಆರೋಪ ಮಾಡಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಸರ್ಕಾರ ನ್ಯಾಯಾಲಯದ ಮೊರೆ ಹೋಗುವ ಪರಿಸ್ಥಿತಿ ಬಂದಿದೆ. ನ್ಯಾಯಾಲಯ ಕೂಡ ರಾಜ್ಯಕ್ಕೆ ಆಗಿರುವ ತೊಂದರೆ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತಂದಿದೆ.ಕೇಂದ್ರದ ಜನವಿರೋಧಿ ನಿಲುವಿನಿಂದ ಜನಸಾಮಾನ್ಯರು ಬೇಸತ್ತಿದ್ದಾರೆ. ಎಲ್ಲಾ ಪಕ್ಷಗಳವರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ.
ಹಾಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ವಿಶ್ವಾಸವಿದೆ.
ವೆಂಕಟೇಶ್ ಹೇಳಿದರು.