ಮೈಸೂರು : ಮೈಸೂರು ಕೊಡಗು ಲೋಕಸಭಾ ಚುನಾವಣೆಯಲ್ಲಿ ದಲಿತ ಮತಗಳ ಮೇಲೆ ಕಣ್ಣಿಟ್ಟ ಕಾಂಗ್ರೆಸ್ ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಸಮಾವೇಶ ನಡೆಸಿದೆ.
ಹೂಟಗಳ್ಳಿಯಲ್ಲಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಮಾವೇಶ ಜರುಗಿದ್ದು, ಸಚಿವರಾದ ಕೆ.ಎಚ್.ಮುನಿಯಪ್ಪ, ಡಾ.ಎಚ್ಸಿ ಮಹದೇವಪ್ಪ ಸೇರಿದಂತೆ ಅನೇಕ ದಲಿತ ಮುಖಂಡರು ಭಾಗಿಯಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಲು ದಲಿತ ಸಮಾಜದ ಮುಖಂಡರ ಸಮಾವೇಶ ಮಾಡಿದ್ದಾರೆ.
ನೂರಾರು ದಲಿತ ಸಂಘಟನೆಗಳ ಕಾರ್ಯಕರ್ತರು ಮುಖಂಡರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.