ಮೈಸೂರು : ವರುಣ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟವಾಗಿದೆ. ವರುಣ ವಿಧಾನಸಭೆ ವ್ಯಾಪ್ತಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಮುಖಂಡರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ 33 ಜನ ಅರ್ಜಿ ಹಾಕಿದ್ವಿ,
ಅದರಲ್ಲಿ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ
ಕಾರ್ಯಕರ್ತರ ಅಭಿಪ್ರಾಯ ಪಡೆಯದೆ ಏಕಾಏಕಿ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ. ಈಗಿರುವ ಅಧ್ಯಕ್ಷರು ಬಲವಂತವಾಗಿ ಇಷ್ಟವಿಲ್ಲದೆ ಆ ಸ್ಥಾನದಲ್ಲಿ ಕುಳಿತಿದ್ದಾರೆ
ಈವರೆಗೂ ಕ್ಷೇತದಲ್ಲಿ ಯಾವುದೇ ಸಭೆ ನಡೆಸಿಲ್ಲ
ಹೀಗಾದರೇ ವರುಣ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಕಥೆಯೇನು ? ಚುನಾವಣೆ ಹತ್ತಿರ ಬರುತ್ತಿದೆ ಕ್ಷೇತ್ರದಲ್ಲಿ ಯಾವುದೇ ಕಾರ್ಯಚಟುವಟಿಕೆ ನಡೆಯುತ್ತಿಲ್ಲ ಎಂದು ಸಭೆಯಲ್ಲಿ ಅಸಮಾಧನಿತ ಮುಖಂಡರ ಆಕ್ರೋಶ ವ್ಯಕ್ತಪಡಿಸಿದ್ದಾರೆ.