ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯರವರ ಪ್ರತಿಷ್ಠೆಯ ಕ್ಷೇತ್ರವಾಗಿರುವ ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಬ್ಬರದ ಪ್ರಚಾರಕ್ಕೆ ಕೊಳ್ಳೇಗಾಲ ಪಟ್ಟಣದ ಸಾಕ್ಷಿಯಾಯ್ತು.
ಜಿಲ್ಲೆಯ ಕೊಳ್ಳೇಗಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕಾಂಗ್ರೇಸ್ ಅಭ್ಯರ್ಥಿ ಸುನಿಲ್ ಬೋಸ್ ರವರನ್ನು ಶತಾಯ ಗತಾಯ ಗೆಲ್ಲಿಸಲೇ ಬೇಕಾದ ಪರಿಸ್ಥಿತಿ ಉಂಟಾಗಿದ್ದು, ಅದರ ಹಿನ್ನಲೆಯಲ್ಲಿ ಶುಕ್ರವಾರ ಕೊಳ್ಳೇಗಾಲದ ಲಿಂಗಾಣಪುರ ಬಳಿ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿಗಳು ಕೊಳ್ಳೇಗಾಲದ ಪಟ್ಟಣದಲ್ಲಿ ಎಂಜಿ.ಎಸ್ ವಿ ಕಾಲೇಜು ಆವರಣದಲ್ಲಿ ಪ್ರಚಾರ ಸಭೆಗೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಹೆಚ್. ಎಂ. ಗಣೇಶ್ ಪ್ರಸಾದ್, ಜಿಲ್ಲಾಧ್ಯಕ್ಷ ಮರಿಸ್ವಾಮಿ ಸೇರಿದಂತೆ ಅನೇಕರು ಹಾಜರಿದ್ದರು.
ಲೋಕಸಭೆ ಕ್ಷೇತ್ರದ ವಿವಿದೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದರು.