ದೇಶದಲ್ಲಿ ಬಿಜೆಪಿ ಗೆದ್ದರೆ ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಹೆಚ್.ಡಿ. ಕೋಟೆಯಲ್ಲಿ ಗುರುವಾರ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, “ತುರ್ತುಪರಿಸ್ಥಿತಿ ವೇಳೆ ಇಂದಿರಾ ಗಾಂಧಿ ಸಂವಿಧಾನ ತಿದ್ದಿದ್ದನ್ನು ಕಾಂಗ್ರೆಸ್ ಮರೆ ಮಾಚಿದೆ. ಸಮಾನತೆ ಹಕ್ಕು ಕೊಡಬೇಕೆಂದು ಬಿಜೆಪಿ ಕೋವಿಂದ್ ಮತ್ತು ಮುರ್ಮು ಅವರನ್ನು ರಾಷ್ಟ್ರಪತಿ ಮಾಡಿದೆ ಎಂದು ಕಾಂಗ್ರೆಸ್ ಗೆ ಟಾಂಗ್ ನೀಡಿದರು.