ರಾಮನಗರ : ಸಿದ್ದರಾಮಯ್ಯ ಅವರು ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಅವರು ಮೂಲ ನಮ್ಮ ಪಕ್ಷದವರಲ್ಲ, ಬೇರೆ ಪಕ್ಷದಿಂದ ಬಂದವರು ಆದರೂ, ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣಾ ಅಭ್ಯರ್ಥಿ ಡಿ.ಕೆ ಸುರೇಶ್ ಹೇಳಿದ್ದಾರೆ.
ರಾಮನಗರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬೇರೆ ಪಕ್ಷದಿಂದ ಬಂದವರು ಆದರೂ ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇಂದು ಎರಡನೇ ಬಾರಿಗೆ ಸಿಎಂ ಆಗಿ ನಮ್ಮ ನಾಯಕರಾಗಿದ್ದಾರೆ ಎಂದಿದ್ದಾರೆ.
ಜೆಡಿಎಸ್ನವರು ಸಿದ್ದರಾಮಯ್ಯ ಅವರಿಗೆ ಬೀಗ ಹಾಕಿ ಕೂರಿಸಿದ್ರು, ಸಸ್ಪೆಂಡ್ ಮಾಡಿದ್ದರು. ಆದ್ರೆ ಅವರ ಯೋಗ ಅಲ್ಲಿ ಬರೆದಿರಲಿಲ್ಲ, ಕಾಂಗ್ರೆಸ್ ನಲ್ಲಿ ಬರೆದಿತ್ತು. ಹಾಗೆಯೇ ನಿಮ್ಮ ಯೋಗ ಸಹ ಬರೆದಿರಬಹುದು. ಯಾರನ್ನೂ ಅಡ್ಡ ಹಾಕೋಕೆ ಹೋಗ್ಬೇಡಿ, ಪಕ್ಷ ಬೆಳೆಯುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಹುರುಪು ಮೂಡಿಸಿದರು.