ಸಾಲಿಗ್ರಾಮ : ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತದೆ ಎಂಬ ನಂಬಿಕೆಯಿಂದ. ಇಂದು ಈ ರಾಜ್ಯದ ಜನತೆ 136 ಮಂದಿಯನ್ನ ಕಾಂಗ್ರೆಸ್ ಪಕ್ಷದ ಶಾಸಕರನ್ನಾಗಿ ಆಯ್ಕೆ ಮಾಡುವ ಮೂಲಕ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದು ಈ ರಾಜ್ಯದ ಎಲ್ಲಾ ಜನತೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.
ಸಾಲಿಗ್ರಾಮ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಾಮಣೇ ಗೌಡ (ಸ್ಪಾರ್ ಚಂದ್ರು) ಅವರ ಪರವಾಗಿ ಬಿರುಸಿನ ಮತ ಪ್ರಚಾರ ನಡೆಸಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಅವರು. ಈ ಹಿಂದೆ ಬಿಜೆಪಿ ಪಕ್ಷ ಮತ್ತು ಪಕ್ಷದ ನಾಯಕರುಗಳನ್ನು ಎಲ್ಲಂದರಲ್ಲಿ ಅತಿ ಹೆಚ್ಚು ಟೀಕೆ ಮಾಡುತ್ತಿದ್ದ ಎಚ್. ಡಿ.ದೇವೇಗೌಡರು ಹಾಗೂ ಕುಮಾರಸ್ವಾಮಿ ಇಂದು ತಮ್ಮ ಸ್ವಾರ್ಥಕ್ಕಾಗಿ ಅವರೊಂದಿಗೆ ಮೈತ್ರಿ ಮಾಡಿಕೊಂಡು. ತಮ್ಮ ಪಕ್ಷದ ಸ್ವಾಭಿಮಾನಿ ಕಾರ್ಯಕರ್ತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಹೇಳಿದರು.
ಇನ್ನು ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾಗಲೇ ಮಂಡ್ಯ ಕ್ಷೇತ್ರವನ್ನು ಅಭಿವೃದ್ಧಿ ಮಾಡಿಲ್ಲ ಇನ್ನು ಮುಂದೆ ಮಾಡುತ್ತಾರ ಎಂದು ಪ್ರಶಿಸಿದ. ಅವರು, ಲೋಕಸಭಾ ಚುನಾವಣೆ ಮುಗಿದ ನಂತರ ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವೆ ಎಂಬ ಭ್ರಮೆಯಲ್ಲಿ ವಿರೋಧಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಆದರೆ ನಮ್ಮದು ಜನಪರ 5 ವರ್ಷಗಳ ಸುಭದ್ರ ಗ್ಯಾರಂಟಿ ಸರ್ಕಾರ, ಯಾವುದೇ ಗ್ಯಾರಂಟಿ ಯೋಜನೆ ಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಂತರ ಶಾಸಕ ಡಿ.ರವಿಶಂಕರ್ ಮಾತನಾಡಿ, ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅವಳಿ ತಾಲ್ಲೂಕುಗಳನ್ನು ಸಮಾನವಾಗಿ ಅಭಿವೃದ್ಧಿ ಪಡಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ಈಗಾಗಲೇ ಸಾಲಿಗ್ರಾಮಕ್ಕೆ ತಾಲೂಕಿಗೆ ಅಗತ್ಯವಿರುವ ಹಲವು ಕೆಲಸಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು ಮುಂದಿನ ದಿನಗಳಲ್ಲಿ ಅವುಗಳನ್ನು ಅನುಷ್ಠಾನಗೊಳಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಹೇಳಿದರು.
ನನಗೆ ಮತ ನೀಡಿ ಆಶೀರ್ವಾದ ಮಾಡಿರುವ ಮತದಾರರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೂ ಅಧಿಕ ಮತಗಳಿಂದ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಾಮಣೇ ಗೌಡ ಮಾತನಾಡಿ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಗೆ ಮತ್ತಷ್ಟು ರಾಜಕೀಯ ಶಕ್ತಿ ಹಾಗೂ ಸಮಗ್ರ ಅಭಿವೃದ್ಧಿಗೆ ಅನುಕೂಲವಾಗಲು ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನಗೂ ಆಶೀರ್ವಾದ ಮಾಡಿ. ಈ ತಾಲೂಕಿನ ಜನತೆಯ ಸೇವೆ ಮಾಡಲು ನನಗೊಂದು ಅವಕಾಶ ಮಾಡಿ ಕೊಡಬೇಕೆಂದು ಮನವಿ ಮಾಡಿದರು.
ಹೊಸೂರು ಗ್ರಾಮಕೆ ಆಗಮಿಸಿದ ಸಚಿವರು, ಶಾಸಕರು ಹಾಗೂ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅವರಿಗೆ ಬೃಹತ್ ಗಾತ್ರದ ಹಾರವನ್ನು ಹಾಕುವುದರ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ತಾ.ಪಂ.ಮಾಜಿ ಅಧ್ಯಕ್ಷರುಗಳಾದ ಹಾಡ್ಯ ಮಹದೇವಸ್ವಾಮಿ, , ಮಾಜಿ ಸದಸ್ಯರಾದ ಎ.ಟಿ.ಗೋವಿಂದೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್ ಶಂಕರ್, , ರಮೇಶ್, ವಕ್ತಾರ ಜಾಬೀರ್,
ಮುಖಂಡರುಗಳಾದ ಡೈರಿ ಮಾದು, ರಮೇಶ್, ಹೆಚ್
ಜೆ,, ಏಲ್ ಐ ಸಿ ಜಗದೀಶ್ ಸೈಟ್ ಮಂಜುನಾಥ್ , ಲಾಯರ್ ಪುನಿ ಚಿಕ್ಕಕೊಪ್ಪಲು ನವೀನ್, , ಹೊಸಟ್ಟಿ ರವಿ ಪರಶುರಾಮ್, ಹಳೆಯೂರು ಪ್ರಭಾಕರ್ ಹೆಬ್ಬಾಳ ಶೇಖರ್ , ನವೀನ್, ಪುನೀತ್ ಸೇರಿದಂತೆ ಮತ್ತಿತರು ಹಾಜರಿದ್ದರು.