ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ. 2ರ ಮಂಚೇಗೌಡನಕೊಪ್ಪಲಿನ ಗ್ರಾಮ ದೇವತೆ ಹರಿಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಯದುವೀರ್ ಒಡೆಯರ್ ಪರ ಪ್ರಚಾರ ಮಾಡಿದ್ದಾರೆ.
ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಪರವಾಗಿ ಮನೆ ಮನೆ ಚುನಾವಣಾ ಪ್ರಚಾರಕ್ಕೆ ಶಾಸಕರು ಹಾಗೂ ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ ಟಿ ದೇವೇಗೌಡರು ಹಾಗೂ ಚಾಮರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ನಗರಾಧ್ಯಕ್ಷರಾದ ಎಲ್. ನಾಗೇಂದ್ರ ರವರು ವಿದ್ಯುಕ್ತವಾಗಿ ಚಾಲನೆ ನೀಡಿದರು.
ಇದೆ ಸಂಧರ್ಭದಲ್ಲಿ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಶ್ರೀಮತಿ ಪ್ರೇಮ ಶಂಕರೇಗೌಡರು, ಹಾಗೂ ಜೆಡಿಎಸ್ -ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.