ಚಾಮರಾಜನಗರ; ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆಯನ್ನು ಖಂಡಿಸಿ ಚಾಮರಾಜನಗರ ದಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಾಮರಾಜನಗರ ಶ್ರೀ ಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಕೇಸರಿ ಶಲ್ಯ ಧರಿಸಿ ಪ್ರತಿಭಟನಾ ಮರವಣಿಗೆ ನಡೆಸಿದರು.
ಶ್ರೀ ಭುವನೇಶ್ವರಿ ವೃತ್ತದ ಬಳಿ ಬ್ಯಾರಿಕೇಟ್ ಹಾಗೂ ಪೊಲೀಸರಿಂದ ಪ್ರತಿಭಟನೆ ಹತ್ತಿಕ್ಕುವ ಯತ್ನ ನಡೆದರೂ ಸಹ ಪ್ರತಿಭಟನಾಕಾರರು ಬ್ಯಾರೀಕೇಟ್ ಸರಿಸಿ ಪ್ರತಿಭಟನೆ ನಡೆಸಿದರು.